BREAKING: ಬಾಂಬ್ ಬೆದರಿಕೆ ಕರೆ; ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ತಪಾಸಣೆ

ಕೊಚ್ಚಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ ತಪಾಸಣೆ ಕಾರ್ಯ ನಡೆಸಲಾಗಿದೆ.

ಇಂಡಿಗೋ ವಿಮಾನ ಸಂಖ್ಯೆ 6E6482 ರಲ್ಲಿ ಬಾಂಬ್ ಇರಿಸಲಾಗಿದೆ ಎಂದು ಇಂದು ಬೆಳಗ್ಗೆ 10.30 ರ ಸುಮಾರಿಗೆ ಬೆದರಿಕೆ ಕರೆ ಬಂದಿತ್ತು ಎನ್ನಲಾಗಿದೆ. ಹೀಗಾಗಿ ವಿಮಾನ ಇನ್ನೇನು ಟೇಕ್ ಆಫ್ ಆಗುವ ಹಂತದಲ್ಲಿದ್ದಾಗ ಪ್ರಯಾಣಿಕರನ್ನು ಕೆಳಗಿಳಿಸಿ ವಿಮಾನವನ್ನು ನಿರ್ಜನ ಪ್ರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.

ಕೂಡಲೇ ತಪಾಸಣಾಧಿಕಾರಿಗಳು ಸ್ಥಳಕ್ಕೆ ತೆರಳಿ ವಿಮಾನವನ್ನು ಸಂಪೂರ್ಣವಾಗಿ ತಪಾಸಣೆ ನಡೆಸುತ್ತಿದ್ದಾರೆ. ಆಗಸ್ಟ್ 18 ರಂದು ಸಹ ದೆಹಲಿ – ಪುಣೆ ನಡುವೆ ಸಂಚರಿಸುತ್ತಿದ್ದ ವಿಸ್ತಾರ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆದರಿಕೆ ಕರೆ ಬಂದಿದ್ದು, ತಪಾಸಣೆ ಬಳಿಕ ಇದು ಹುಸಿ ಕರೆ ಎಂಬುದು ಬಹಿರಂಗವಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read