BIG NEWS : ಸಿಎಂ, ಡಿಸಿಎಂ ಉಗ್ರರಿಗೆ ‘ಅಮಾಯಕರ ಪಟ್ಟ’ ಕಟ್ಟಿದ್ದಕ್ಕೆ ಬೆಂಗಳೂರಿಗೆ ಬಾಂಬ್ ಬೆದರಿಕೆ : ಬಿಜೆಪಿ ವಾಗ್ಧಾ

ಬೆಂಗಳೂರು : ಉಗ್ರರಿಗೆ ಸಿಎಂ, ಡಿಸಿಎಂ ಅಮಾಯಕರ ಪಟ್ಟ ಕಟ್ಟಿದ್ದಕ್ಕೆ ಬೆಂಗಳೂರಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.

ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ . ಆದಿಯಾಗಿ ಎಲ್ಲರೂ ಸೆರೆಸಿಕ್ಕ ಉಗ್ರರಿಗೆ ಅಮಾಯಕ ಪಟ್ಟ ಕಟ್ಟಿದ ಕಾರಣ, ಇಂದು ಬೆಂಗಳೂರಿನ ಶಾಲೆಗಳು ಬಾಂಬ್ ಬೆದರಿಕೆಯನ್ನು ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ಆರು ತಿಂಗಳಲ್ಲಿ ಬೆಲೆಯೇರಿಕೆ ಜೊತೆ ಮತಾಂಧರ ಸಂಖ್ಯೆ ಸಹ ಏರಿದೆ. ಶಾಂತಿ ನೆಮ್ಮದಿಯ ತವರೂರಾಗಿದ್ದ ಕರ್ನಾಟಕದಲ್ಲಿ ಭದ್ರತಾ ವೈಫಲ್ಯಗಳೇ ಜಾಸ್ತಿಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಬಿಜೆಪಿ ಕಿಡಿಕಾರಿದೆ.

ಮುಂಬೈ ತಾಜ್ ಹೋಟೆಲ್ ಮೇಲಿನ ದಾಳಿ ಮಾದರಿಯಲ್ಲೇ ನಗರದ ಶಾಲೆಗಳ ಮೇಲೆ ಅಟ್ಯಾಕ್ ಮಾಡುವ ಬೆದರಿಕೆ, ಭಾರತೀಯರು ಮುಸ್ಲಿಮರನ್ನು ಅವಹೇಳನ ಮಾಡುತ್ತಿದ್ದಾರೆ ಎಂಬಂತಹ ಸಂದೇಶಗಳನ್ನು ಕಳಿಸಿರುವುದು ಭಾರತೀಯರಿಗೆ ಬೆದರಿಕೆ ಒಡ್ಡುವ ಸಂದೇಶವಾಗಿದೆ. ಇದರ ಹಿಂದೆ ಯಾವುದೋ ದೊಡ್ಡ ಜಾಲವೇ ಇದ್ದಂತಿದೆ. ಸರ್ಕಾರ ಇದನ್ನು ಹಗರುವಾಗಿ ಪರಿಗಣಿಸದೆ, ಯಾರು ಈ ರೀತಿ ಸಂದೇಶ ಕಳಿಸಿದ್ದಾರೆ ಎಂಬುದನ್ನು ಶೀಘ್ರದಲ್ಲೇ ಪತ್ತೆ ಹಚ್ಚಲು ಸೂಕ್ತವಾದ ತನಿಖೆ ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

https://twitter.com/BJP4Karnataka/status/1730489328529244452

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read