ಕೋಲಾರ : ಕೋಲಾರ ಡಿ.ಸಿ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ (Bomb Threat) ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೋಲಾರದ ಟಮಕದಲ್ಲಿರುವ ಡಿಸಿ ಕಚೇರಿಗೆ ಅನಾಮಧೇಯ ವ್ಯಕ್ತಿಯೋರ್ವ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕೂಡಲೇ ಸಿಬ್ಬಂದಿಗಳು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಬಾಂಬ್ ಸ್ಕ್ವಾಡ್ ನೊಂದಿಗೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ಇತ್ತೀಚೆಗೆ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದ ಹಲವು ಡಿಸಿ ಕಚೇರಿಗಳಿಗೆ ಸರಣಿ ಬಾಂಬ್ ಬೆದರಿಕೆ ಬಂದಿತ್ತು.

