HomeLatest NewsBREAKING : ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

BREAKING : ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬಾಂಬ್ ಬೆದರಿಕೆ ಸಂದೇಶ ಪ್ರಕರಣಗಳು ಹೆಚ್ಚುತ್ತಿದೆ. ಇದೀಗ ನಗರದ ಶಾಂತಿನಗರದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ (Consulate General of Italy) ಅನಾಮಧೇಯ ವ್ಯಕ್ತಿಯೊಬ್ಬ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ.

ಇಟಲಿಯ ಕಾನ್ಸುಲ್ ಜನರಲ್ ಕಚೇರಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ.ರಾಯಭಾರಿ ಕಚೇರಿಯ ಇಮೇಲ್ ಗೆ ಈ ಬೆದರಿಕೆ ಬಂದಿದೆ ಎಂದು ತಿಳಿದುಬಂದಿದೆ. ಕಚೇರಿ ಆವರಣದಲ್ಲಿ 5 ಆರ್ ಡಿ ಎಕ್ಸ್ ಬಾಂವ್ ಸ್ಪೋಟಿಸುವುದಾಗಿ ದುಷ್ಕರ್ಮಿಗಳು ಎಚ್ಚರಿಕೆ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಬಾಂಬ್ ಪತ್ತೆ ದಳ (BDDS) ಇಡೀ ಪ್ರದೇಶವನ್ನು ತಪಾಸಣೆ ನಡೆಸುತ್ತಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ರಾಯಭಾರಿ ಕಚೇರಿಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಕಚೇರಿಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿ, ಶೋಧ ಕಾರ್ಯ ಮುಂದುವರಿಸಲಾಗಿದೆ. ಈ ಬೆದರಿಕೆ ಕರೆ ಎಲ್ಲಿಂದ ಬಂತು? ಇದರ ಹಿಂದೆ ಯಾರಿದ್ದಾರೆ? ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular