ಮೈಸೂರು: ಬಾಂಬ್ ಬೆದರಿಕೆ ಸಂದೇಶ ರವಾನಿಸಿ ಆತಂಕ ಸೃಷ್ಟಿಸುತ್ತಿದ್ದ ಪ್ರಮುಖ ಆರೋಪಿಯೊಬ್ಬನನ್ನು ದೆಹಲಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ.
ಶ್ರೀನಿವಾಸ್ ಬಂಧಿತ ಆರೋಪಿ. ಮೈಸೂರಿನ ಬೃಂದಾವಣ ಬಡಾವಣೆಯ ಎರಡನೇ ಹಂತದ ನಿವಾಸಿ. ಈತ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳು, ಶಾಲೆಗಳು, ಕೋರ್ಟ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸುತ್ತಿದ್ದ.
ಕಳೆದ ಒಂದು ತಿಂಗಳಲ್ಲಿ ಹಲವೆಡೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಿ ಬಾಂಬ್ ಇಟ್ಟಿ ಸ್ಫೋಟಿಸುವುದಾಗಿ ಬೆದರಿಸುತ್ತಿದ್ದ. ಇದನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ.

