HomeUncategorizedBREAKING: ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ

BREAKING: ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ

ಬೆಂಗಳೂರು: ಮೈಸೂರು ಹಳೇ ಕೋರ್ಟ್, ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ಬಳಿಕ ಇದೀಗ ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

ಬೆಂಗಳೂರಿನ ಲಾಲ್ ಬಾಗ್ ರಸ್ತೆಯಲ್ಲಿರುವ ಪಾಸ್ ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಪಾಸ್ ಪೋರ್ಟ್ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ದುಷ್ಕರ್ಮಿಗಳು ಸಂದೇಶ ರವಾನಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ವಿಲ್ಸನ್ ಗಾರ್ಡನ್ ಹಾಗೂ ಎಸ್.ಆರ್.ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ, ಬಾಂಬ್ ಪತ್ತೆ ಹಾಗೂ ಬಾಂಬ್ ನಿಷ್ಕ್ರಿಯ ದಳಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular