ಬಿಪಿಎಲ್ ಕುಟುಂಬದವರಿಗೆ ಗುಡ್ ನ್ಯೂಸ್: ಬಲು ದುಬಾರಿ ವೆಚ್ಚದ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತ

ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ(Bone marrow) ಕಸಿ ಸೇರ್ಪಡೆ ಮಾಡಲಾಗಿದೆ. ಇದರಿಂದ ಬಿಪಿಎಲ್ ಕುಟುಂಬ ಸದಸ್ಯರು ಬಲು ದುಬಾರಿ ವೆಚ್ಚದ ಅಸ್ಥಿಮಜ್ಜೆ ಚಿಕಿತ್ಸೆ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಜೀವ ಸಾರ್ಥಕತೆ ಸಂಸ್ಥೆಯಡಿ ಹೆಸರು ನೋಂದಾಯಿಸಿಕೊಂಡವರಿಗೆ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ನೀಡಲಾಗುವುದು. ಮೂಳೆ ಕ್ಯಾನ್ಸರ್, ಥಲಸ್ಸೇಮಿಯಾ ಮತ್ತಿತರ ಸಮಸ್ಯೆ ಹೊಂದಿದವರೆಗೆ ಅಸ್ಥಿಮಜ್ಜೆ ಕಸಿ ಚಿಕಿತ್ಸೆಯಿಂದ ಅನುಕೂಲವಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಈ ಕಸಿಗೆ ಸುಮಾರು 40 ಲಕ್ಷ ರೂಪಾಯಿವರೆಗೂ ವೆಚ್ಚವಾಗುತ್ತದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಇದನ್ನು ಸೇರ್ಪಡೆ ಮಾಡಿದ್ದು, ಜೀವ ಸಾರ್ಥಕತೆ ಸಂಸ್ಥೆಯಡಿ ನೋಂದಾಯಿಸಿರುವ ಆಸ್ಪತ್ರೆಗಳಲ್ಲಿ ಉಚಿತವಾಗಿ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.

ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿ ಸೇರ್ಪಡೆಗೆ ಕಳೆದ ವರ್ಷ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು ಮನವಿ ಮಾಡಿದ್ದರು. ಇತ್ತೀಚೆಗೆ ಸಂಪುಟ ಸಭೆಯಲ್ಲಿ ಅಂಗಾಂಗ ಕಸಿ ಯೋಜನೆ ವಿಸ್ತರಣೆಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಅಂತೆಯೇ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿ ಸೇರ್ಪಡೆ ಮಾಡಲಾಗಿದೆ.

ಯೋಜನೆಯಡಿಯಲ್ಲಿ ಮೂಳೆ ಮಜ್ಜೆಯ ಕಸಿ ಮಾಡುವಿಕೆಯನ್ನು ಮಾತ್ರವಲ್ಲದೆ, ಬಹು ಅಂಗಾಂಗ ಹೃದಯ ಮತ್ತು ಶ್ವಾಸಕೋಶ ಕಸಿ ಮತ್ತು ಮೆನಿಸ್ಕಲ್ ಅಂಗಾಂಶ ಕಸಿ ಮಾಡುವಿಕೆಯನ್ನು ಸಹ ಸೇರಿಸಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read