BIG NEWS: ವಿಧಾನಸೌಧದ ಆವರಣದಲ್ಲಿ ʼಪುಸ್ತಕ ಮೇಳʼ ; ಲಾಂಛನ ವಿನ್ಯಾಸಕರಿಗೆ ಬಹುಮಾನ

ಕರ್ನಾಟಕ ವಿಧಾನಸಭೆ ಸಚಿವಾಲಯದ ವತಿಯಿಂದ 2025ರ ಫೆಬ್ರವರಿ 28 ರಿಂದ ಮಾರ್ಚ್‌ 3ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ʼಪುಸ್ತಕ ಮೇಳʼವನ್ನು ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದೆ.

ಪುಸ್ತಕ ಮೇಳಕ್ಕೆ ಸಂಬಂಧಿಸಿದ ಲಾಂಛನವನ್ನು ವಿನ್ಯಾಸಗೊಳಿಸಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ. ಆಯ್ಕೆಗೊಳ್ಳುವ ಲಾಂಛನದ ವಿನ್ಯಾಸಕರಿಗೆ ಬಹುಮಾನವನ್ನು ನೀಡಲಾಗುವುದು.

ಆಸಕ್ತರು ಪುಸ್ತಕ ಮೇಳಕ್ಕೆ ಸರಿಹೊಂದುವ ಲಾಂಛನವನ್ನು ವಿನ್ಯಾಸಗೊಳಿಸಿ ತಮ್ಮ ಅಂಚೆ, ವಿಳಾಸ, ದೂರವಾಣಿ ಸಂಖ್ಯೆ, ಮುಂತಾದ ವಿವರಗಳೊಂದಿಗೆ ಫೆಬ್ರವರಿ 3ರ ರೊಳಗಾಗಿ ಕಾರ್ಯದರ್ಶಿಗಳು, ಕರ್ನಾಟಕ ವಿಧಾನಸಭೆ ಸಚಿವಾಲಯ, ಕೊಠಡಿ ಸಂಖ್ಯೆ 121, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಕಳುಹಿಸಿಕೊಡಲು ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read