HomeLatest Newsಪುಸ್ತಕ ಪ್ರಿಯರೇ ಗಮನಿಸಿ : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಎಲ್ಲಾ ಪುಸ್ತಕಗಳು ಶೇ. 50 ರಷ್ಟು...

ಪುಸ್ತಕ ಪ್ರಿಯರೇ ಗಮನಿಸಿ : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಎಲ್ಲಾ ಪುಸ್ತಕಗಳು ಶೇ. 50 ರಷ್ಟು ರಿಯಾಯಿತಿಯಲ್ಲಿ ಮಾರಾಟ

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಅಂಗವಾಗಿ 2025 ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರಷ್ಟು ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬೇಕು.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.

ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‍ಸೈಟ್ https://kpp.karnataka.gov.in ಮೂಲಕ ಆನ್‍ಲೈನ್ ಪುಸ್ತಕ ಖರೀದಿಯಲ್ಲಿ ಕೂಡ ಈ ಶೇ.50 ರಷ್ಟು ರಿಯಾಯಿತಿ ಲಭ್ಯವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 700ಕ್ಕೂ ಹೆಚ್ಚಿನ ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular