HomeLatest Newsಪುಸ್ತಕ ಪ್ರಿಯರೇ ಗಮನಿಸಿ : 'ಕರ್ನಾಟಕ ಮಾಧ್ಯಮ ಅಕಾಡೆಮಿ'ಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ

ಪುಸ್ತಕ ಪ್ರಿಯರೇ ಗಮನಿಸಿ : ‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ

ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬಂಧಿಸಿದ 40ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ.20 ರವರೆಗೆ ರಿಯಾಯಿತಿಯೂ ನೀಡಲಾಗುತ್ತಿದೆ.

ಆಸಕ್ತರು ಪುಸ್ತಕಗಳ ಕುರಿತ ಮಾಹಿತಿಯನ್ನು X, instagram ಮತ್ತು ಫೇಸ್ಬುಕ್ ಗಳಲ್ಲಿನ ಅಕಾಡೆಮಿಯ ಖಾತೆ @karmediaacademy/ Karnataka Media Academy ಗಳಲ್ಲಿ ಪಡೆಯಬಹುದಾಗಿದೆ. ಆಸಕ್ತರು, ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿಯನ್ನು ದೂರವಾಣಿ ಸಂಖ್ಯೆ 080 22860264 ನಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular