ಪುಸ್ತಕ ಪ್ರಿಯರೇ ಗಮನಿಸಿ : ‘ಮೈಸೂರು ದಸರಾ’ ಹಿನ್ನೆಲೆ ಕನ್ನಡ ಪುಸ್ತಕ ಮಾರಾಟ ಮೇಳ ಆಯೋಜನೆ

ಮೈಸೂರು : ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2025ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್, 22 ರಿಂದ ಅಕ್ಟೋಬರ್, 01 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2025”ನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ, ಹಳೆ ಡಿ.ಸಿ. ಕಚೇರಿ ಬಳಿ ಮೈಸೂರು ಇಲ್ಲಿ ಏರ್ಪಡಿಸಲಾಗಿದೆ.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1 ಸಾವಿರ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು, ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾಯ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್ https://kpp.karnataka.gov.inಟಿ ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆಪ್ಟೆಂಬರ್, 18 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ರ ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು 560002 ದೂ: 080-22484516 / 22107704 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read