HomeKarnatakaಬೋರ್ ವೆಲ್ ಗೆ ತ್ರೀಫೇಸ್ ವಿದ್ಯುತ್ ಲೈನ್ ಸಂಪರ್ಕ ವೇಳೆ ದುರಂತ: ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ...

ಬೋರ್ ವೆಲ್ ಗೆ ತ್ರೀಫೇಸ್ ವಿದ್ಯುತ್ ಲೈನ್ ಸಂಪರ್ಕ ವೇಳೆ ದುರಂತ: ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಲೈನ್ ಮೆನ್ ಸಾವು

ಹಾವೇರಿ: ಹಾವೇರಿಯಲ್ಲಿ ಹೆಸ್ಕಾಂ ನಿರ್ಲಕ್ಷ್ಯಕ್ಕೆ ಯುವಕ ಬಲಿಯಾಗಿದ್ದಾರೆ. ಹಾವೇರಿ ನಗರದ ಮಣಿಗಾರ ಓಣಿಯಲ್ಲಿ ಘಟನೆ ನಡೆದಿದ್ದು, ಲೈನ್ ಮೆನ್ ಸುರೇಶ್(38) ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮತ್ತೊಬ್ಬ ಸಿಬ್ಬಂದಿ ನಿಂಗಪ್ಪ ಗಾಯಗೊಂಡಿದ್ದಾರೆ.

ಬೋರ್ ವೆಲ್ ಗೆ ತ್ರೀಫೇಸ್ ಲೈನ್ ಅಳವಡಿಸುವಾಗ ಅವಘಡ ಸಂಭವಿಸಿದೆ. ವಿದ್ಯುತ್ ಕಡಿತಗೊಳಿಸಿ ಲೈನ್ ಮೆನ್ ಕಾಮಗಾರಿ ಮಾಡುತ್ತಿದ್ದರು. ಏಕಾಏಕಿ ವಿದ್ಯುತ್ ಕನೆಕ್ಟ್ ಮಾಡಿದ್ದರಿಂದ ವಿದ್ಯುತ್ ಪ್ರವಹಿಸಿ ಲೈನ್ ಮೆನ್ ಸುರೇಶ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಸಿಬ್ಬಂದಿ ನಿಂಗಪ್ಪ ಅವರು ಗಾಯಗೊಂಡಿದ್ದು, ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular