HomeKarnatakaಸಾಲಗಾರರಿಗೆ ಗುಡ್ ನ್ಯೂಸ್: ಹೆಚ್ಚಿನ ಬಡ್ಡಿ ವಸೂಲಿ ಮಾಡಿ ಕಿರುಕುಳ ನೀಡುತ್ತಿದ್ದಲ್ಲಿ ದೂರು ನೀಡಿ

ಸಾಲಗಾರರಿಗೆ ಗುಡ್ ನ್ಯೂಸ್: ಹೆಚ್ಚಿನ ಬಡ್ಡಿ ವಸೂಲಿ ಮಾಡಿ ಕಿರುಕುಳ ನೀಡುತ್ತಿದ್ದಲ್ಲಿ ದೂರು ನೀಡಿ

ಚಿತ್ರದುರ್ಗ: ಲೇವಾದೇವಿ ಗಿರವಿ ಹಾಗೂ ಹಣಕಾಸು ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961ರ ಪ್ರಕರಣ 28ರಡಿ ಸರ್ಕಾರವು ಬಡ್ಡಿದರ ನಿಗದಿಪಡಿಸಿದೆ.

ಸರ್ಕಾರವು ಬಡ್ಡಿದರ ನಿಗದಿಪಡಿಸಿರುವ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಲೈಸೆನ್ಸ್ ಪಡೆದ ಲೇವಾದೇವಿ ಹಾಗೂ ಗಿರವಿದಾರರ ಅಂಗಡಿಯಲ್ಲಿ ಸಾರ್ವಜನಿಕರ ಹಿತದೃಷ್ಟಿಗೆ ಸುಲಭವಾಗಿ ಕಾಣುವಂತೆ ಬಡ್ಡಿದರ ವಿಧಿಸುವ ನಾಮಫಲಕಗಳನ್ನು ನಗದು ಕೌಂಟರ್ ಹತ್ತಿರ ದಪ್ಪ ಅಕ್ಷರಗಳಲ್ಲಿ ಮುದ್ರಿಸಿ ಪ್ರದರ್ಶಿಸಬೇಕು.

ಭದ್ರತೆ ಇರುವ ಸಾಲಗಳಿಗೆ ಗರಿಷ್ಟ ವಾರ್ಷಿಕ ಶೇ.14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ಗರಿಷ್ಟ ವಾರ್ಷಿಕ ಶೇ.16 ಮಾತ್ರ ವಿಧಿಸಬೇಕಾಗಿರುತ್ತದೆ. ಈ ದರಗಳಿಗಿಂತ ಮಿತಿ ಮೀರಿದ ಬಡ್ಡಿ ವಿಧಿಸಿ ಸಾಲಗಾರರಿಗೆ ಕಿರುಕುಳ ನೀಡುತ್ತಿದ್ದಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಹಾಗೂ ಗಿರವಿ ಲೇವಾದೇವಿ ಸಹಾಯಕ ನಿಬಂಧಕರು, ಚಿತ್ರದುರ್ಗ ಉಪವಿಭಾಗ, ಚಿತ್ರದುರ್ಗ ಮತ್ತು ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಗಿರವಿ ಲೇವಾದೇವಿ ಉಪ ನಿಬಂಧಕರು, ಚಿತ್ರದುರ್ಗ ಇವರಿಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular