HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ, ತಾರಾಲಯ: ಸರ್ಕಾರಿ ಶಾಲೆಗಳಲ್ಲೂ ಎಐ...

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ, ತಾರಾಲಯ: ಸರ್ಕಾರಿ ಶಾಲೆಗಳಲ್ಲೂ ಎಐ ಕಲಿಕೆ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಲಿಗೂ ಕೃತಕ ಬುದ್ಧಿಮತ್ತೆ(ಎಐ) ಕಲಿಕೆಗೆ ವ್ಯವಸ್ಥೆ ಮಾಡಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌.ಭೋಸರಾಜು ಅವರು ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಅವಕಾಶ ಮಾಡಿಕೊಡುವಂತಹ ನೂತನ ಕಲಿಕಾ ವ್ಯವಸ್ಥೆಯನ್ನು ರೂಪಿಸಲು ಚಿಂತನೆ ನಡೆದಿದೆ. ಕೃತಕ ಬುದ್ಧಿಮತ್ತೆ ಮತ್ತು ಮೆಷಿನ್‌ ಲರ್ನಿಂಗ್‌ ಸವಲತ್ತು ಒದಗಿಸುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ನಿರ್ಮಿಸುವ ಯೋಜನೆ ಪ್ರಗತಿಯಲ್ಲಿದೆ. ಈ ಸಾಲಿನಲ್ಲಿ 4 ಜಿಲ್ಲೆಗಳಲ್ಲಿ ಸ್ಥಾಪಿಸುವ ಗುರಿ ಹೊಂದಿದ್ದೇವೆ. 800ಕ್ಕೂ ಅಧಿಕ ಶಾಲೆಗಳಿಗೆ ಟೆಲಿಸ್ಕೋಪ್‌ ಕೊಡುವ ಯೋಜನೆ ಇದೆ. ವಿಜ್ಞಾನ ನಗರ ಸ್ಥಾಪನೆಗೆ ಈಗಾಗಲೇ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದ್ದು, ದೇವನಹಳ್ಳಿ ಬಳಿ 30 ಎಕರೆ ಜಾಗ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular