HomeKarnatakaಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವು: ಪ್ರಧಾನಿ ಮೋದಿ ಪರಿಹಾರ ಘೋಷಣೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವು: ಪ್ರಧಾನಿ ಮೋದಿ ಪರಿಹಾರ ಘೋಷಣೆ

ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ.

7 ಜನರ ಸಾವಿಗೆ ಸಂತಾಪ ಸೂಚಿಸಿರುವ ಅವರು, ಮೃತರ ಕುಟುಂಬದವರಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ದುರ್ಘಟನೆ ದುರದೃಷ್ಟಕರ. ಮೃತರ ಕುಟುಂಬಗಳೊಂದಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ. ಮೃತರ ಹತ್ತಿರದ ಸಂಬಂಧಿಕರಿಗೆ PMNRF ನಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ಧರಾಮಯ್ಯ ಪರಿಹಾರ ಘೋಷಣೆ

ಬೆಂಗಳೂರಿನ ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ಧರಾಮಯ್ಯ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದು, ತುರ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಘಟನೆ ಅತ್ಯಂತ ನೋವಿನ ವಿಚಾರ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ‌ ಎಂದು ಪ್ರಾರ್ಥಿಸುತ್ತೇನೆ. ಈ ಘೋರ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.  

ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಭೇಟಿ ನೀಡಿ, ಘಟನೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ, ಎಲ್ಲರೂ ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುವುದಾಗಿ ಸಿಎಂ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular