HomeKarnatakaಎಲ್ಲಾ ಸರ್ಕಾರಿ ಆಸ್ಪತ್ರೆಗಳ ಸಮಗ್ರ ಪರಿಶೀಲನೆಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಆದೇಶ

ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಸಮಗ್ರ ಪರಿಶೀಲನೆಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಆದೇಶ

ಬೆಂಗಳೂರು: ಬಿರುಗಾಳಿ ಮಳೆಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು, ಏಳು ಜನರು ಸಾವನ್ನಪ್ಪಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಪರಿಶೀಲನೆ ಆದೇಶ ಹೊರಡಿಸಿದೆ.

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು, ದುರಂತ ಸಂಭವಿಸಿದ ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಬೆಂಗಳೂರಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಸಮಗ್ರ ಪರಿಶೀಲನೆಗೆ ಆದೇಶ ನೀಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೌರಿಂಗ್ ಆಸ್ಪತ್ರೆ, ವಿಕ್ಟೋರಿಯಾ, ಕೆ.ಸಿ ಜನರಲ್ ಆಸ್ಪತ್ರೆ ಮತ್ತು ಸಿ.ವಿ ರಾಮನಗರ ಆಸ್ಪತ್ರೆ ಸೇರಿದಂತೆ ಇತರೆ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ. ಒಂದು ವಾರದೊಳಗೆ ಪರಿಶೀಲನಾ ವರದಿಯನ್ನು ಸಲ್ಲಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ.

ಇನ್ನು ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಘಟನೆಗೆ ಆಡಳಿತ ವ್ಯವಸ್ಥೆಯ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಜಿಬಿಎ ಆಯುಕ್ತರು ಸೇರಿದಂತೆ ಪ್ರಮುಖ ಅಧಿಕಾರಿಗಳ ವಿರುದ್ಧ ಸುಮೋಟೋ (ಸ್ವಯಂಪ್ರೇರಿತ) ಕೇಸ್ ದಾಖಲಿಸಿ ತನಿಖೆ ನಡೆಸಿವುದಾಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular