HomeKarnatakaಶಾಲೆಯಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಗುಂಡು ಸೂಜಿ ನುಂಗಿದ ಬಾಲಕ: ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದು ಜೀವ...

ಶಾಲೆಯಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಗುಂಡು ಸೂಜಿ ನುಂಗಿದ ಬಾಲಕ: ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ರಾಯಚೂರು: ಶಾಲೆಯಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಬಾಲಕ ಗುಂಡು ಸೂಜಿ ನುಂಗಿದ್ದು, ಶ್ವಾಸಕೋಶದೊಳಗೆ ಸೇರಿಕೊಂಡಿದ್ದ ಗುಂಡು ಸುಜಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆ ವೈದ್ಯರು ಬ್ರಾಂಕೋಸ್ಕೋಪಿ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಈ ಮೂಲಕ ಬಾಲಕನ ಪ್ರಾಣ ಉಳಿಸಿದ್ದಾರೆ.

13 ವರ್ಷದ ಶಿವಕುಮಾರ ಪ್ರಾಣಾಪಾಯದಿಂದ ಪಾರಾದ ಬಾಲಕ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮುಚ್ಚಳ ಕ್ಯಾಂಪ್ ನ ಶಿವಕುಮಾರ ಶಾಲೆಯಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಗುಂಡು ಸೂಜಿ ನುಂಗಿದ್ದು, ಶ್ವಾಸಕೋಶದೊಳಗೆ ಸೇರಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈದ್ಯರು ತಪಾಸಣೆ ನಡೆಸಿದಾಗ ಗುಂಡು ಸೂಜಿ ಇರುವುದು ದೃಢಪಟ್ಟಿದ್ದು, ಶಸ್ತ್ರಚಿಕಿತ್ಸೆ ಮೂಲಕ ಸೂಜಿಯನ್ನು ಹೊರತೆಗೆಯಲಾಗಿದೆ. ವೈದ್ಯರಾದ ಡಾ. ಅರವಿಂದ ಸಂಗಾವಿ, ಡಾ. ಕಿರಣ ನಾಯಕ, ಡಾ. ಮಲ್ಲಿಕಾರ್ಜುನ, ಡಾ. ಸಿಂಧು, ಡಾ. ಇಂದುಮತಿ, ತಾಂತ್ರಿಕ ಸಿಬ್ಬಂದಿ ಅಮರೇಶ, ಲಿಂಗರಾಜ್ ಸಮುನ್ ಕ್ಲ್ಯಾರಿ, ನಾರಾಯಣ, ಶಂಕರ ಶಸ್ತ್ರಚಿಕಿತ್ಸೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular