ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಂಬೆ ಗ್ರಾಮದಲ್ಲಿ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ನಿಖಿಲ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಭಾನುವಾರ ಸ್ನೇಹಿತರೊಂದಿಗೆ ನಿಖಿಲ್ ಕ್ರಿಕೆಟ್ ಆಡಲು ಹೋಗಿದ್ದಕ್ಕೆ ಪೋಷಕರು ಬುದ್ದಿವಾದ ಹೇಳಿದ್ದರು. ಓದಿಕೊಳ್ಳುವಂತೆ ತಿಳಿಸಿದ್ದರು. ಇದರಿಂದ ಬಾಲಕ ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.