HomeKarnatakaBIG NEWS: ಬಾಲಕನ ಮೇಲೆಯೇ ಹರಿದ ಟಾಟಾ ಏಸ್: ಸ್ಥಳದಲ್ಲೇ ದುರ್ಮರಣ

BIG NEWS: ಬಾಲಕನ ಮೇಲೆಯೇ ಹರಿದ ಟಾಟಾ ಏಸ್: ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬಾಲಕನ ಮೇಲೆಯೇ ಟಾಟಾ ಏಸ್ ಹರಿದು ಹೋಗಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ನಡೆದಿದೆ.

ಆಟವಾಡುತ್ತಿದ್ದ ಬಾಲಕ ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಈ ವೇಳೆ ಪಕ್ಕದಲ್ಲೇ ಹೋಗುತ್ತಿದ್ದ ಟಾಟಾ ಏಸ್ ಬಾಲಕನ ಮೇಲೆಯೇ ಹರಿದಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಾಹಿರ್ ಪಾಷಾ (5) ಮೃತ ಬಾಲಕ.

ತನ್ನ ಪಾಡಿಗೆ ಆಟವಾಡುತ್ತಿದ್ದ ಬಾಲಕ ಓಡಿ ಹೋಗುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದು, ಈ ವೇಳೆ ಬಂದ ಟಾಟಾ ಏಸ್ ಬಾಲಕನ ತಲೆ ಮೇಲೆ ಹರಿದು ಹೋಗಿದೆ. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular