ಬಳ್ಳಾರಿ: ಎರಡು ದಿನಗಳಿಂದ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾವಿಹಾಳ್ ಗ್ರಾಮದಲ್ಲಿ ನಡೆದಿದೆ.
ಸಿರಿ ಮೃತ ಬಾಲಕ. ಎರಡು ದಿನಗಳಿಂದ ಕಾಣೆಯಾಗಿದ್ದ ಬಾಲಕ ಬಾವಿಯಲ್ಲಿ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಬಾಲಕ ಕಾಣದಿದ್ದಾಗ ಪೋಷಕರು, ಕುಟುಂಬದವರು ತೀವ್ರ ಹುಡುಕಾಟ ನಡೆಸಿದ್ದರು. ಆದಾಗ್ಯೂ ಬಾಲಕನ ಸುಳಿವಿರಲಿಲ್ಲ. ಇದೀಗ ಬಾಲಕನ ಶವ ಬಾವಿಯಲ್ಲಿ ತೇಲುತ್ತಿರುವುದನ್ನು ಕಂಡು ಮೃತದೇಹ ಮೇಲಕ್ಕೆತ್ತಿದ್ದಾರೆ.
ಮನೆ ಬಳಿ ಆಟವಾಡುತ್ತಿದ್ದ ಬಾಲಕ ಏಕಾಏಕಿ ಬಾವಿಗೆ ಬಿದ್ದು ಸಾವನ್ನಪ್ಪಿರಬಹುದು ಎನ್ನಲಾಗಿದೆ. ಬಾವಿಯ ಸುತ್ತ ಯಾವುದೇ ಕಟ್ಟೆ, ಗೋಡೆ ಇರಲಿಲ್ಲ ಇದೇ ಕಾರಣಕ್ಕೆ ಆಕಸ್ಮಿಕವಾಗಿ ಬಾಲಕ ಬಾವಿಗೆ ಬಿದ್ದು ದುರಂತ ಸಂಭವಿಸಿರಬಹುದು ಎನ್ನಲಾಗಿದೆ.