ಬೆಳಗಾವಿ: ಆಟವಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬವಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಲಕ್ಷ್ಮೀನಗರದಲ್ಲಿ ನಡೆದಿದೆ.
10 ವರ್ಷದ ಅಕಿಯಾರ್ ಝಾರೆ ಮೃತ ಬಾಲಕ. ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ ವೇಳೆ ಚಂಡು ಬಾವಿಯ ಬಳಿ ಹೋಗಿದೆ. ಚಂಡನ್ನು ತರಲೆಂದು ಹೋಗಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾನೆ.
ನೀರಿನಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಬಾವಿಯಿಂದ ಬಾಲಕನ ಮೃತದೇಹ ಮೇಲಕ್ಕೆತ್ತಿದ್ದಾರೆ. ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.