HomeKarnatakaSHOCKING NEWS: ಬಾಲಕನ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ: ಸ್ಥಳದಲ್ಲೇ ಸಾವು

SHOCKING NEWS: ಬಾಲಕನ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ: ಸ್ಥಳದಲ್ಲೇ ಸಾವು

ಕೊಪ್ಪಳ: ಬಹಿರ್ದೆಸೆಗೆ ಹೋಗಿದ್ದ ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ.

ವಿನಯ್ (11) ಮೃತ ಬಾಲಕ. ಕನಕಗಿರಿ ಪಟ್ಟಣದ ನಿವಾಸಿ. ಕನಕಗಿರಿ ಹೊರವಲಯದ ಕೆರೆ ಬಳಿ ಬಹಿರ್ದೆಸೆಗೆಂದು ಬಾಲಕ ಹೋಗೊದ್ದ. ಈ ವೇಳೆ ವಿದ್ಯುತ್ ತಂತಿ ಆತನ ಮೈಮೇಲೆ ತುಂಡಾಗಿ ಬಿದ್ದಿದೆ. ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಗ್ರಾಮಶರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular