ಶಿವಮೊಗ್ಗ: ತಾಲೂಕಿನ ಹಾಡೋನನಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ವಿದ್ಯುತ್ ಶಾಕ್ ನಿಂದ ಬಾಲಕ ಮೃತಪಟ್ಟಿದ್ದಾನೆ.
ಮಹೇಶ್ ಮತ್ತು ಆಶಾ ದಂಪತಿಯ ಪುತ್ರ ಸಮರ್ಥ್(14) ಮೃತಪಟ್ಟ ಬಾಲಕ. ಶಿವಮೊಗ್ಗದ ಬಸವೇಶ್ವರನಗರ ಆಕ್ಸ್ ಫರ್ಡ್ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಸಮರ್ಥ್ ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದ ಅಂಬಾಭವಾನಿ ದೇವಾಲಯಕ್ಕೆ ಹೋಗಿದ್ದಾನೆ.
ನವರಾತ್ರಿ ಅಂಗವಾಗಿ ದೇವಾಲಯಕ್ಕೆ ದೀಪಾಲಂಕಾರ ಮಾಡಲಾಗಿದ್ದು, ದೇವಾಲಯದ ಗೇಟ್ ಮುಟ್ಟಿದಾಗ ವಿದ್ಯುತ್ ಶಾಕ್ ನಿಂದ ಸಮರ್ಥ್ ಕುಸಿದು ಬಿದ್ದಿದ್ದಾನೆ. ಕೂಡಲೇ ಮನೆಯವರು ಸ್ಥಳೀಯ ಆಸ್ಪತ್ರೆಯಲ್ಲಿ ತೋರಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ಆದರೆ ಈ ವೇಳೆಗೆ ಬಾಲಕ ಸಮರ್ಥ್ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.