ಹೊಸಪೇಟೆ: ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದು ಬಾಲಕ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದ ಪಾಂಡುನಾಯಕ(14) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದು ಪಾಂಡುನಾಯಕ ಮೃತಪಟ್ಟಿದ್ದಾನೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.