HomeLatest NewsSHOCKING: ವಿಷಾಹಾರ ಸೇವಿಸಿ ಬಾಲಕ ಸಾವು: ತಾಯಿ, ಸಹೋದರ ಅಸ್ವಸ್ಥ

SHOCKING: ವಿಷಾಹಾರ ಸೇವಿಸಿ ಬಾಲಕ ಸಾವು: ತಾಯಿ, ಸಹೋದರ ಅಸ್ವಸ್ಥ

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಯಡ್ರಮ್ಮನಹಳ್ಳಿಯಲ್ಲಿ ವಿಷಾಹಾರ ಸೇವಿಸಿ ಬಾಲಕ ಮೃತಪಟ್ಟಿದ್ದಾನೆ.

ದುರ್ಗೇಶ್(14) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ದುರ್ಗೇಶನ ತಾಯಿ ಕಮಲಮ್ಮ ಮತ್ತು ಸಹೋದರ ಪ್ರಜ್ವಲ್ ಸ್ಥಿತಿ ಗಂಭೀರವಾಗಿದೆ. ಗುಡ್ಲನೂರು ಬಸವರಾಜ ಅವರ ಪತ್ನಿ ಕಮಲಮ್ಮ ಮತ್ತು ಪುತ್ರರಾದ ಪ್ರಜ್ವಲ್ ಹಾಗೂ ದುರ್ಗೇಶ್ ಶನಿವಾರ ರಾತ್ರಿ ಊಟ ಮಾಡಿದ ನಂತರ ಆಹಾರ ವಿಷಪೂರಿತವಾಗಿದ್ದರಿಂದ ಮೂವರಿಗೂ ವಾಂತಿ ಭೇದಿಯಾಗಿ ತೀವ್ರ ಅಸ್ವಸ್ಥರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೊಪ್ಪಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ದುರ್ಗೇಶ್ ಮೃತಪಟ್ಟಿದ್ದಾನೆ. ತಾಯಿ ಕಮಲಮ್ಮ ಚೇತರಿಸಿಕೊಳ್ಳುತ್ತಿದ್ದು, ಪ್ರಜ್ವಲ್ ಸ್ಥಿತಿ ಗಂಭೀರವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular