HomeKarnatakaಜಮೀನಿಗೆ ತೆರಳುತ್ತಿದ್ದ ಬಾಲಕ ಕಾಲು ಜಾರಿ ಕಾಲುವೆಗೆ ಬಿದ್ದು ಸಾವು

ಜಮೀನಿಗೆ ತೆರಳುತ್ತಿದ್ದ ಬಾಲಕ ಕಾಲು ಜಾರಿ ಕಾಲುವೆಗೆ ಬಿದ್ದು ಸಾವು

ಮಂಗಳವಾರದಂದು ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ 13 ವರ್ಷದ ಬಾಲಕನೊಬ್ಬ ಬಳಿಕ ಜಮೀನಿನಲ್ಲಿದ್ದ ತಂದೆಯನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ಕಾಲುವೆಗೆ ಜಾರಿ ಬಿದ್ದು ಸಾವನಪ್ಪಿದ್ದಾನೆ.

ಇಂತಹದೊಂದು ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಚಿಕ್ಕ ಆಸಂಗಿ ಗ್ರಾಮದಲ್ಲಿ ನಡೆದಿದ್ದು, ಕಲ್ಲಯ್ಯ ಹಿರೇಮಠ ಎಂಬ ಬಾಲಕ ಮೃತಪಟ್ಟಿದ್ದಾನೆ. ಈತನ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಮೀನಿಗೆ ಹೋಗುತ್ತಿದ್ದ ಬಾಲಕ ಕಾಲುವೆಗೆ ಬಿದ್ದಿದ್ದು, ಈ ವಿಚಾರ ಯಾರ ಗಮನಕ್ಕೂ ಬಂದಿಲ್ಲ. ಮಗ ರಾತ್ರಿಯಾದರೂ ಬಾರದ ಕಾರಣ ಗಾಬರಿಗೊಂಡ ಪೋಷಕರು ಹುಡುಕಾಟ ನಡೆಸಿದ್ದು, ಇಂದು ಬೆಳಗ್ಗೆ ಕಾಲುವೆಯಲ್ಲಿ ಆತನ ಶವ ಪತ್ತೆಯಾಗಿದೆ. ಪುತ್ರನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಈಗ ಮುಗಿಲು ಮುಟ್ಟಿದೆ.

For Latest News Updates, Join Our Whatsapp Community🚩
RELATED ARTICLES

Most Popular