BIG NEWS: ಬಾಲಕನನ್ನು ಕೊಂದು ಮೃತದೇಹ ಮಲದಗುಂಡಿಗೆ ಎಸೆದ ದುರುಳರು: ಐವರು ವಿದ್ಯಾರ್ಥಿಗಳು ಅರೆಸ್ಟ್

ಭುವನೇಶ್ವರ: 12 ವರ್ಷದ ಬಾಲಕನನ್ನು ಹತ್ಯೆಗೈದು ಮೃತದೇಹವನ್ನು ಮಲದಗುಂಡಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮದರಸಾದ ಐವರು ವಿದ್ಯಾರ್ಥಿಗಳನ್ನು ಬಂಧಿಸಿರುವ ಘಟನೆ ಒಡಿಶಾದ ನಯಾಗಢ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ರಣಪುರ ಠಾಣಾ ವ್ಯಾಪ್ತಿಯಲ್ಲಿ ಮದರಸಾವೊಂದರಲ್ಲಿ ಈ ಘಟನೆ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿರುವ ಪೊಲೀಸರು 12ರಿಂದ 15 ವರ್ಷದವರೆಗಿನ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.

ನಯಾಗಢದ ಹೆಚ್ಚುವರಿ ಎಸ್ ಪಿ ಸುಭಾಷ್ ಚಂದ್ರ ಪಾಂಡಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬಾಲಕ ಕಟಕ್ ಜಿಲ್ಲೆಯ ಮೂಲದವನೆಂದು ತಿಳಿದುಬಂದಿದೆ. ಬಾಲಕ ಕಿರಿಯ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದ. ಹಾಗಾಗಿ ಆಗಸ್ಟ್ 31ರಂದು ಆತನ ಕೊಲೆಗೆ ಪ್ಲಾನ್ ಮಾಡಲಾಗಿತ್ತು. ಸೆ. 2ರಂದು ಬಾಲಕನ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಆಕಸ್ಮಿಕ ಸಾವು ಎಂದು ಭಾವಿಸಲಾಗಿತ್ತು. ಆದರೆ ತನಿಖೆ ವೇಳೆ ದೈಹಿಕಿವಾಗಿ ಹಲ್ಲೆ ನಡೆಸಿ ಕೊಲೆಮಾಡಿರುವುದು ಗೊತ್ತಾಗಿದೆ..

ಸದ್ಯ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೊಲೆ ಹಾಗೂ ಪೋಕ್ಸೋ ಕೇಸ್ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read