ವಿದ್ಯಾರ್ಥಿನಿ ಹಣೆಗೆ ನಡು ರಸ್ತೆಯಲ್ಲೇ ಸಿಂಧೂರವಿಟ್ಟ ಅಪ್ರಾಪ್ತ; ನಾಟಕೀಯ ಘಟನೆ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು, ನೋಡುಗರಲ್ಲಿ ಅಚ್ಚರಿ ಮೂಡಿಸಿದೆ. ಅಪ್ರಾಪ್ತ ಬಾಲಕನೊಬ್ಬ ವಿದ್ಯಾರ್ಥಿನಿಯೊಬ್ಬಳಿಗೆ (ಆಕೆಯೂ ಅಪ್ರಾಪ್ತೆ) ನಡುರಸ್ತೆಯಲ್ಲಿ ಹಣೆಗೆ ಸಿಂಧೂರವಿಟ್ಟಿದ್ದಾನೆ. ಸಿನಿಮೀಯ ರೀತಿಯಲ್ಲಿ ನಡೆದ ಈ ಘಟನೆಯನ್ನು ಸ್ಥಳದಲ್ಲಿದ್ದವರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿದ್ದಾರೆ.

ಈ ಘಟನೆ ಯಾವ ರಾಜ್ಯದ ಯಾವ ಜಿಲ್ಲೆಯಲ್ಲಿ ನಡೆದಿದೆ ಎಂಬುದು ತಿಳಿದು ಬಂದಿಲ್ಲ. ಶಾಲಾ ಬ್ಯಾಗ್ ಹಾಕಿಕೊಂಡು ತನ್ನ ಸ್ನೇಹಿತೆಯರೊಂದಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಹಣೆಗೆ ಈ ಅಪ್ರಾಪ್ತ ಬಾಲಕ ಸಿಂಧೂರವಿಟ್ಟಿದ್ದಾನೆ. ಆಕೆಯೂ ಇದಕ್ಕೆ ಯಾವುದೇ ಪ್ರತಿರೋಧ ತೋರಿಸದಿರುವುದನ್ನು ಗಮನಿಸಿದರೆ ಪರಸ್ಪರ ಒಪ್ಪಿಗೆಯಿಂದಲೇ ಇದು ನಡೆದಿದೆ ಎಂದು ಹೇಳಬಹುದಾಗಿದೆ.

ಅಷ್ಟೇ ಅಲ್ಲ, ಶಾಲಾ ಬಾಲಕಿ ಜೊತೆಯಿದ್ದ ವಿದ್ಯಾರ್ಥಿನಿಯರು ಈ ನಾಟಕೀಯ ಮದುವೆ ಕಾರ್ಯಕ್ರಮಕ್ಕೆ ಸಾಕ್ಷಿ ವಹಿಸಿದಂತೆ ಕಂಡು ಬರುತ್ತಿದ್ದು, ತಮ್ಮ ಮನೆಯ ಬಾಲ್ಕನಿಯಿಂದ ಇದನ್ನೆಲ್ಲಾ ನೋಡುತ್ತಿದ್ದ ವ್ಯಕ್ತಿಯೊಬ್ಬರು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋ ಈಗ ಫುಲ್ ವೈರಲ್ ಆಗಿದ್ದು ನೆಟ್ಟಿಗರು ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ.

https://twitter.com/Nikhilgupta1104/status/1798623962496389368

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read