HomeKarnatakaSHOCKING NEWS: ಪೋಷಕರು ಬೈದರೆಂದು ಆತ್ಮಹತ್ಯೆಗೆ ಶರಣಾದ 10 ವರ್ಷದ ಬಾಲಕ

SHOCKING NEWS: ಪೋಷಕರು ಬೈದರೆಂದು ಆತ್ಮಹತ್ಯೆಗೆ ಶರಣಾದ 10 ವರ್ಷದ ಬಾಲಕ

ಶಿವಮೊಗ್ಗ: ಮಕ್ಕಳಿಗೆ ಪೋಷಕರು ಬುದ್ಧಿವಾದ ಹೇಳಲೂ ಯೋಚಿಸಬೇಕಾದ ಸ್ಥಿತಿ ಬಂದಿದೆ. ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗೂ ಮಕ್ಕಳು ದುಡುಕಿನ ನಿರ್ಧಾರಗಳನ್ನು ಕೈಗೊಂಡು ಬದುಕನ್ನೇ ಅಂತ್ಯಗೊಳಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇಲ್ಲೋರ್ವ ಬಾಲಕ ತಂದೆ-ತಾಯಿ ಬೈದರೆಂಬ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ 10 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೀತಮ್ (10) ಸಾವಿಗೆ ಶರಣಾದ ಬಾಲಕ.

ಪೋಷಕರು ಬೈದರೆಂಬ ಕಾರಣಕ್ಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ್ದಾನೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular