ಬಾಗಲಕೋಟೆ: ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಬಾಲಕ ನೀರುಪಾಲಾಗಿದ್ದು, ಆತನನ್ನು ರಕ್ಷಿಸಲು ಹೋದ ಯೋಧ ಕೂಡ ನೀರಿನಲ್ಲಿ ಮುಳುಗಿದ್ದು, ಇಬ್ಬರೂ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಬಾಲಕ ಶೇಖಪ್ಪ (15) ಹಾಗೂ ಯೋಧ ಮಹಾಮ್ತೇಶ (25) ಎಂದು ಗುರುತಿಸಲಾಗಿದೆ. ಬಾಲಕ ಶೇಖಪ್ಪ ಮಲಪ್ರಭಾ ನದಿಗೆ ಸ್ನಾನಕ್ಕೆಂದು ತೆರಳಿದ್ದ. ಈ ವೇಳೆ ಬಾಲಕ ನೀರಿನಲ್ಲಿ ಮುಳುಗಿದ್ದಾನೆ. ತಕ್ಷಣ ಬಾಲಕನ ರಕ್ಷಣೆಗೆ ಯೋಧ ಮಹಾಂತೇಶ್ ಕೂಡ ನದಿಗೆ ಇಳಿದು ಬಾಲಕನ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ನದಿಯಲ್ಲಿ ಮೃತದೇಹಗಳಿಗಾಗಿ ಶೋಧ ನಡೆಸಿ, ಇಬ್ಬರ ಶವ ಹೊರತೆಗೆದಿದ್ದಾರೆ. ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.