HomeKarnatakaಅಪ್ರಾಪ್ತ ಬಾಲಕನ ಕಿಡ್ನ್ಯಾಪ್: ಇಬ್ಬರು ಆರೋಪಿಗಳು ಅರೆಸ್ಟ್

ಅಪ್ರಾಪ್ತ ಬಾಲಕನ ಕಿಡ್ನ್ಯಾಪ್: ಇಬ್ಬರು ಆರೋಪಿಗಳು ಅರೆಸ್ಟ್

ಉಡುಪಿ: ಅಪ್ರಾಪ್ತ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೊಬ್ಬ ಬಾಲಾಪರಾಧಿಯನ್ನು ವಶಕ್ಕೆ ಪಡೆದು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ. ವಿಖ್ಯಾತ್ ಆಚಾರ್ಯ (19) ಹಾಗೂ ಸುಚಿತ್ ನಾಯಕ್ (20) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ, ಓರ್ವ ಬಾಲಾಪರಾಧಿಯನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಗಳು 9ನೇ ತರಗತಿ ವಿದ್ಯಾರ್ಥಿಯನ್ನು ಕೇರಳಕ್ಕೆ ಕರೆದೊಯ್ದು, ವುಡ್ ಕಂಪನಿಯೊಂದರಲ್ಲಿ ಬಲವಂತವಾಗಿ ಕೆಲಸ ಮಾಡಿಸಿದ್ದರೆಂದು ಆರೋಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕನನ್ನು ಮನೆಗೆ ಹೋಗಲು ಅವಕಾಶ ನೀಡದೆ ವೈರ್‌ನಿಂದ ಹಲ್ಲೆ ನಡೆಸಿ, ಚೂರಿ ತೋರಿಸಿ ಕೊಲೆ ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದೆ. ಪ್ರಕರಣ ಸಂಬಂಧ ಬ್ರಹ್ಮಾವರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular