HomeKarnatakaಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಮರುಪರಿಶೀಲನೆವರೆಗೆ ಯಥಾವತ್ತಾಗಿ ಮುಂದುವರಿಕೆ

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಮರುಪರಿಶೀಲನೆವರೆಗೆ ಯಥಾವತ್ತಾಗಿ ಮುಂದುವರಿಕೆ

ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಸಲ್ಲಿಸಲಾದ/ಪಾವತಿದಾರರ ಒಟ್ಟು 903 ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯನ್ನಾಗಿ ಪರಿವರ್ತನೆ ಮಾಡಲಾಗಿರುತ್ತದೆ.

ಆದರೆ ಸರ್ಕಾರ ಮರು ಪರಿಶೀಲಿಸುವವರೆಗೆ ಯಥವಾತ್ತಾಗಿ ಮುಂದುವರೆಸಲು ಸೂಚಿಸಿದಂತೆ ಈ ಎಲ್ಲಾ 903 ಪಡಿತರ ಚೀಟಿಗಳನ್ನು ಯಥಾವತ್ತಾಗಿ ಬಿಪಿಎಲ್ ಪಡಿತರ ಚೀಟಿಯನ್ನಾಗಿ ಮುಂದುವರೆಸಲಾಗಿದೆ. ಈ ಸಂಬಂಧ ಪಡಿತರ ಚೀಟಿದಾರರು ಸಂಬಂಧಿಸಿದ ತಾಲ್ಲೂಕು ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಮಡಿಕೇರಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಜೆ.ಬಿ.ಶ್ರೀಧರಮೂರ್ತಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular