ಬಡವರಿಗೆ ಗುಡ್ ನ್ಯೂಸ್: ಬಿಪಿಎಲ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ರಾಜ್ಯದ ಯಾವ ಬಡ ಕುಟುಂಬದವರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ದಿ. ಇಂದಿರಾ ಗಾಂಧಿ ಜನ್ಮ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಯಾವ ಬಡ ಕುಟುಂಬದವರು ಅನ್ನಭಾಗ್ಯ ಯೋಜನೆಯಿಂದ ವಂಚಿತವಾಗಬಾರದು. ಇದಕ್ಕಾಗಿ ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಕೆಲವು ಅನರ್ಹರು ಸೌಲಭ್ಯ ಪಡೆದುಕೊಂಡರೂ ಚಿಂತೆ ಇಲ್ಲ. ಅರ್ಹರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದು. ಎಲ್ಲ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಸಿಗಬೇಕು ಎಂದು ಸಿಎಂ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read