ಬೆಂಗಳೂರು: ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸದ್ಯಕ್ಕಿಲ್ಲ, ಆರೋಗ್ಯ ಸಮಸ್ಯೆಯುಳ್ಳಯವರಿಗೆ ಮಾತ್ರ ಕಾರ್ಡ್ ನೀಡಲಾಗುವುದು ಎಂದು ಹೇಳಲಾಗಿದೆ.
ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸುವ ಆನ್ಲೈನ್ ಪೋರ್ಟಲ್ ಅನ್ನು ಪುನಾರಂಭಿಸಿಲ್ಲ. ಹೊಸ ಅರ್ಜಿಗೂ ಇನ್ನು ಅವಕಾಶವಿಲ್ಲ. ರಾಜ್ಯದಾತ್ಯಂತ ಬಿಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ ಸುಮಾರು 2.94 ಲಕ್ಷ ಮಂದಿ ಕಾಯುತ್ತಿದ್ದಾರೆ. ಆದರೆ, ಹೊಸದಾಗಿ ಅರ್ಜಿದಾರರಿಗೆ ಅವಕಾಶವಿಲ್ಲ ಎಂದು ಹೇಳಲಾಗಿದೆ.
ಆರೋಗ್ಯ ತುರ್ತು ಇರುವವರಿಗೆ, ಕಾರ್ಮಿಕರಿಗೆ ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಅರ್ಜಿಗಳನ್ನು ಆಯಾ ಜಿಲ್ಲೆಗಳ ಉಪ ನಿರ್ದೇಶಕರ ಶಿಫಾರಸ್ಸಿನ ಮೇರೆಗೆ ಆಹಾರ ಇಲಾಖೆ ಆಯುಕ್ತರು ಅನುಮೋದನೆ ನೀಡಲಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಅನೇಕರು ಬಿಪಿಎಲ್ ಕಾರ್ಡ್ ಪಡೆಯಲು ಮುಂದಾಗಿದ್ದಾರೆ ಎನ್ನುವ ಕಾರಣದಿಂದ ಪಡಿತರ ಚೀಟಿಯ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಇರುವ ನಿಯಮಗಳನ್ನೇ ಅನುಸರಿಸಲಾಗುವುದು. ಹೊಸದಾಗಿ ಮಾರ್ಗಸೂಚಿ ಬಂದರೆ ಅವುಗಳನ್ನು ಅಳವಡಿಸಲಾಗುವುದು ಎಂದು ಹೇಳಲಾಗಿದೆ.
ಅರ್ಜಿ ಸಲ್ಲಿಸಿದ 2.94 ಲಕ್ಷ ಮಂದಿಗೆ ಬಿಪಿಎಲ್ ಕಾರ್ಡ್ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಹೊಸ ಕಾರ್ಡ್ ಗಳ ನೀಡುವುದಿಲ್ಲ.
ತುರ್ತು ಆರೋಗ್ಯ ಸಮಸ್ಯೆ ಇರುವವರಿಗೆ ಮಾತ್ರ ಅಗತ್ಯತೆ ಪರಿಶೀಲಿಸಿ ಕಾರ್ಡ್ ಗಳನ್ನು ನೀಡಲಾಗುವುದು. ಹೊಸ ಕಾರ್ಡ್ ಪಡೆದುಕೊಳ್ಳಲು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು. ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮಿತಿಯಲ್ಲಿರಬೇಕು. ತುರ್ತು ಆರೋಗ್ಯ ಸಮಸ್ಯೆ ಇದ್ದರೆ ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು. http://ahara.kar.nic.in ವೆಬ್ಸೈಟ್ ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.