ನಕಲಿ ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದ ಅನರ್ಹರಿಗೆ ಬಿಗ್ ಶಾಕ್: 12 ಲಕ್ಷ ಪಡಿತರ ಚೀಟಿ ರದ್ದು

ಬೆಂಗಳೂರು: ನಕಲಿ ದಾಖಲೆ ನೀಡಿ ಪಡೆದುಕೊಂಡಿದ್ದ ಸುಮಾರು 12.47 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಅವುಗಳನ್ನು ಎಪಿಎಲ್ ಕಾರ್ಡ್ ಆಗಿ ಬದಲಾಯಿಸಲಾಗಿದೆ.

ಈ ವರ್ಷ ಮತ್ತಷ್ಟು ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಹಚ್ಚುವ ಉದ್ದೇಶದಿಂದ ಆದಾಯ ತೆರಿಗೆ ಇಲಾಖೆ, ಆರ್‌ಟಿಓ, ಸಬ್ ರಿಜಿಸ್ಟ್ರಾರ್ ಕಚೇರಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಲು ಆಹಾರ ಇಲಾಖೆ ಕ್ರಮ ಕೈಗೊಂಡಿದೆ.

ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಳ್ಳಲು ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಐಷಾರಾಮಿ ಕಾರು ಹೊಂದಿರಬಾರದು. ಮೂರು ಎಕರೆಗಿಂತ ಹೆಚ್ಚು ಕೃಷಿ ಜಮೀನು ಹೊಂದಿರಬಾರದು. ಸರ್ಕಾರಿ ನೌಕರಿ, ಬಾಡಿಗೆ ಮನೆಗಳನ್ನು ಹೊಂದಿದವರು ಬಿಪಿಎಲ್ ಕಾರ್ಡ್ ಪಡೆದುಕೊಳ್ಳುವಂತಿಲ್ಲ. ಇಂತಹ ಕೆಲವು ಮಾನದಂಡ ಉಲ್ಲಂಘಿಸಿ ಸುಳ್ಳು ಮಾಹಿತಿ ನೀಡಿ ಅನೇಕರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಅಂತವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಪ್ರಸ್ತುತ ಬಹುತೇಕ ಸೇವೆಗಳಿಗೆ ಆಧಾರ್ ಸಂಖ್ಯೆ ಕಡ್ಡಾಯವಾಗಿದ್ದು, ಐಷಾರಾಮಿ ಕಾರು ಹೊಂದಿದವರು ಇದ್ದರೆ ಆರ್‌ಟಿಓ ಕಚೇರಿಯಿಂದ, ತೆರಿಗೆ ಪಾವತಿದಾರರಾಗಿದ್ದರೆ ಐಟಿ ಇಲಾಖೆಯಿಂದ, ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಿದವರ ಬಗ್ಗೆ ವಿವಿಧ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ನಿಗದಿಪಡಿಸಿದ ಮಾನದಂಡಗಳನ್ನು ಉಲ್ಲಂಘಿಸಿದವರ ಬಗ್ಗೆ ಮಾಹಿತಿ ಸಂಗ್ರಹಿಸಿ ಅಂತಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲಾಗುವುದು. ಅನರ್ಹರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಲ್ಲಿ ಅವರಿಗೆ ಎಪಿಎಲ್ ಕಾರ್ಡ್ ಕೊಡಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read