HomeKarnatakaಅನರ್ಹ ಫಲಾನುಭವಿಗಳಿಗೆ ಶಾಕ್: 20 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದು ಮಾಡಲು ಸರ್ಕಾರ ಚಿಂತನೆ

ಅನರ್ಹ ಫಲಾನುಭವಿಗಳಿಗೆ ಶಾಕ್: 20 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದು ಮಾಡಲು ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಪಡೆದುಕೊಂಡಿರುವ ಸುಮಾರು 20 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಚಿಂತನೆ ನಡೆಸಿದೆ.

ಅನರ್ಹರ ಪತ್ತೆ ಹಚ್ಚಲು ಖಾಸಗಿ ಸಂಸ್ಥೆಗೆ ಸಮೀಕ್ಷೆ ಹೊಣೆ ನೀಡಲಾಗಿದೆ ಎನ್ನಲಾಗಿದೆ. ಅನ್ನಭಾಗ್ಯ ಯೋಜನೆಯ ಅನಗತ್ಯ ವೆಚ್ಚ ಉಳಿಸಲು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಪ್ಲಾನ್ ಮಾಡಿದ್ದಾರೆ. ಆಹಾರ ಭದ್ರತೆ ಕಾಯ್ದೆಯ ಪ್ರಕಾರ ರಾಜ್ಯದಲ್ಲಿ 1.03 ಕೋಟಿ ಬಿಪಿಎಲ್ ಕಾರ್ಡ್ ಗಳು ಇರಬೇಕು. ಆದರೆ, 1.16 ಕೋಟಿಗೂ ಹೆಚ್ಚು ಬಿಪಿಎಲ್ ಕಾರ್ಡುಗಳನ್ನು ವಿತರಿಸಲಾಗಿದೆ.

ಸುಮಾರು 14 ಲಕ್ಷ ಹೆಚ್ಚುವರಿ ಕಾರ್ಡ್ ಗಳಿದ್ದು, ಅವುಗಳನ್ನು ರದ್ದು ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ಈಗ 20 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ಅನ್ನಭಾಗ್ಯ ಯೋಜನೆಯಡಿ ಅನಗತ್ಯವಾಗಿ ಖರ್ಚಾಗುತ್ತಿರುವ ಹಣ ಉಳಿಸಲು ಸರ್ಕಾರ ಚಿಂತನೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅಂತಹವರ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು. ಅವರಿಗೆ ಎಪಿಎಲ್ ಕಾರ್ಡ್ ನೀಡಲಾಗುವುದು. ಈ ಕುರಿತು ಸಮೀಕ್ಷೆ ನಡೆಸಲು ಖಾಸಗಿ ಕಂಪನಿಗೆ ಜವಾಬ್ದಾರಿ ವಹಿಸಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular