HomeKarnatakaಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಎರಡೂವರೆ ಲಕ್ಷ ಅರ್ಜಿ ವಿಲೇವಾರಿ ನಂತರವೇ ಹೊಸ ಅರ್ಜಿ ಸ್ವೀಕಾರ

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಎರಡೂವರೆ ಲಕ್ಷ ಅರ್ಜಿ ವಿಲೇವಾರಿ ನಂತರವೇ ಹೊಸ ಅರ್ಜಿ ಸ್ವೀಕಾರ

ಬೆಂಗಳೂರು: ಬಿಪಿಎಲ್ ಕಾರ್ಡ್ ವಿತರಿಸುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಸದ್ಯಕ್ಕೆ ಬಿಪಿಎಲ್ ಕಾರ್ಡ್ ವಿತರಣೆ ಇಲ್ಲ. ಹಳೆಯ ಅರ್ಜಿಗಳ ವಿಲೇವಾರಿ ನಂತರವೇ ಹೊಸ ಅರ್ಜಿಗಳಿಗೆ ಆಹ್ವಾನ ನೀಡಲಾಗುವುದು ಎಂದು ಹೇಳಲಾಗಿದೆ.

ಬಡ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯ ವಿತರಣೆಗಾಗಿ ಆದ್ಯತೆ ಮೇರೆಗೆ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸಬೇಕಿದೆ. ಸುಮಾರು ಎರಡು ವರ್ಷಗಳಿಂದ ಅರ್ಜಿ ಆಹ್ವಾನಿಸಿಲ್ಲ. ಇದರಿಂದಾಗಿ ಅನ್ನಭಾಗ್ಯ ಯೋಜನೆಯಡಿ ಅಕ್ಕಿ, ಹೆಚ್ಚುವರಿ ಅಕ್ಕಿ ಬದಲು ಹಣ ಪಡೆದುಕೊಳ್ಳುವ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದೆ.

ಸುಮಾರು ಎರಡೂವರೆ ಲಕ್ಷ ಅರ್ಜಿಗಳು ವಿಲೇವಾರಿಗೆ ಬಾಕಿ ಇದ್ದು, ಇನ್ನೂ ನಾಲ್ಕೈದು ಲಕ್ಷಕ್ಕೂ ಹೆಚ್ಚು ಕುಟುಂಬಗಳು ಹೊಸದಾಗಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಹೊಸದಾಗಿ ಬಿಪಿಎಲ್ ಕಾರ್ಡ್ ವಿತರಿಸಿದರೆ ಪಡಿತರ ವಿತರಣೆ ಕಾರ್ಡ್ ಪಡೆದುಕೊಂಡವರಿಗೆ ಗೃಹಲಕ್ಷ್ಮಿ ಯೋಜನೆಯಡಿ 2,000 ರೂ. ನೀಡಬೇಕಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ ಎನ್ನುವ ಕಾರಣದಿಂದ ವಿನಾಕಾರಣ ಅರ್ಜಿಗಳನ್ನು ಆಹ್ವಾನಿಸದೇ ನೆಪ ಹೇಳಲಾಗುತ್ತಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಡತನ ರೇಖೆಗಿಂತ ಕೆಳಗಿರುವವರು ಉಚಿತ ಆಹಾರ ಧಾನ್ಯ ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿದ್ದು, ಈಗಾಗಲೇ ಗುರಿ ಮೀರಿ ಕಾರ್ಡ್ ಗಳನ್ನು ವಿತರಿಸಲಾಗಿದೆ. ಮತ್ತೆ ಲಕ್ಷಾಂತರ ಕಾರ್ಡ್ ಗಳನ್ನು ವಿತರಿಸಿದರೆ ಹೊರೆಯಾಗಲಿದೆ. ರಾಜ್ಯದಲ್ಲಿ 2013ರ ಜನಸಂಖ್ಯೆ ಆಧಾರದ ಮೇಲೆ 1.15 ಕೋಟಿ ಪಡಿತರ ಚೀಟಿ ವಿತರಿಸುವ ಗುರಿ ನಿಗದಿಪಡಿಸಿದ್ದು, 1.48 ಕೋಟಿ ಕಾರ್ಡ್ ಗಳನ್ನು ವಿತರಿಸಲಾಗಿದೆ. ಹಳೆಯ ಅರ್ಜಿಗಳೇ ಸುಮಾರು 2 ಲಕ್ಷಕ್ಕೂ ಅಧಿಕ ಇರುವುದರಿಂದ ಇವುಗಳನ್ನು ವಿಲೇವಾರಿ ಮಾಡಿದ ನಂತರ ಹೊಸ ಅರ್ಜಿಗಳ ಸ್ವೀಕರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular