HomeKarnatakaಬಿಪಿಎಲ್ ಕಾರ್ಡ್ ಇದ್ದವರು ಸೇರಿ ಪಡಿತರ ಚೀಟಿ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ಬಿಪಿಎಲ್ ಕಾರ್ಡ್ ಇದ್ದವರು ಸೇರಿ ಪಡಿತರ ಚೀಟಿ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ನವೆಂಬರ್ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದೆ.

ನವೆಂಬರ್ 2024 ರ ಮಾಹೆಯ ಪಡಿತರ ವಿತರಣೆಯಲ್ಲಿ ಅಂತ್ಯೋದಯ(ಎಎವೈ) ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 21 ಕೆಜಿ ಅಕ್ಕಿ, 14 ಕೆಜಿ ಜೋಳ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪಿಹೆಚ್‍ಎಚ್(ಬಿಪಿಎಲ್) ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ 3 ಕೆಜಿ ಅಕ್ಕಿ, 2 ಕೆಜಿ ಜೋಳ ಉಚಿತವಾಗಿ ವಿತರಿಸಲಾಗುತ್ತದೆ. ಅಂತರರಾಜ್ಯ ಪೋರ್ಟಿಬಿಲಿಟಿ ಮೂಲಕ ಪಡಿತರ ಪಡೆಯುವವರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತದೆ.

ಜಿಲ್ಲೆಯಲ್ಲಿ 29,360 ಅಂತ್ಯೋದಯ ಹಾಗೂ 3,54,357 ಬಿಪಿಎಲ್ ಒಟ್ಟು 3,83,717 ಪಡಿತರ ಚೀಟಿಗಳು ಚಾಲ್ತಿಯಲ್ಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೆಂಬರ್ ಮಾಹೆ 1ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಮಂಗಳವಾರ ರಜಾ ಹೊರತುಪಡಿಸಿ ಪ್ರತಿ ದಿನ ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಸಾಯಂಕಾಲ 4 ರಿಂದ ರಾತ್ರಿ 9 ಗಂಟೆಯವರೆಗೆ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ- ಕೆವೈಸಿ ಮಾಡುವ ಹಾಗೂ ಎನ್‍ಎಫ್‍ಎಸ್‍ಎ ಯಡಿ ಪಡಿತರ ವಿತರಣೆ ಕಾರ್ಯ ಜರುಗಲಿದೆ. ಪಡಿತರ ಚೀಟಿದಾರರು ಬಯೋಮೆಟ್ರಿಕ್ ನೀಡಿದ ತಕ್ಷಣವೇ ಪಡಿತರ ಪಡೆಯಲು ತಿಳಿಸಿದೆ.

ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು.

ಕಾಳಸಂತೆಯಲ್ಲಿ ಅನಧಿಕೃತವಾಗಿ ಆಹಾರಧಾನ್ಯವನ್ನು ದಾಸ್ತಾನು, ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಜರುಗಿಸಲಾಗುವದು. ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ, ಸಂಬಂಧಿಸಿದ ತಹಶೀಲ್ದಾರ ಕಚೇರಿ ಅಥವಾ ಜಂಟಿ ನಿರ್ದೇಶಕರ ಕಚೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಧಾರವಾಡ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular