HomeKarnatakaಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಒಟ್ಟಿಗೆ 2 ತಿಂಗಳ ರೇಷನ್: ಪ್ರತಿ ಸದಸ್ಯರಿಗೆ...

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಒಟ್ಟಿಗೆ 2 ತಿಂಗಳ ರೇಷನ್: ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ಉಚಿತ

ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ(ಬಿಪಿಎಲ್) ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ(ಎನ್‍ಎಫ್‍ಎಸ್‍ಎ)ಯಡಿ ವಿತರಿಸಲಾಗುವ 5 ಕೆಜಿ ಆಹಾರ ಧಾನ್ಯದೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 5 ಕೆಜಿ ಆಹಾರಧಾನ್ಯದ ಬದಲಾಗಿ ಪ್ರತಿ ಕೆಜಿಗೆ 34 ರೂ.ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ 170 ರೂ.ರಂತೆ ಹಣವನ್ನು ವರ್ಗಾಯಿಸಲಾಗಿರುತ್ತದೆ.

ಆದರೆ, ಫೆಬ್ರವರಿ-2025 ನೇ ತಿಂಗಳಿನಿಂದ ಹಣದ ಬದಲಾಗಿ ಅಕ್ಕಿಯನ್ನೇ ನೀಡುವ ಕುರಿತು ಸರ್ಕಾರವು ತೀರ್ಮಾನಿಸಿ, ಆದೇಶವನ್ನು ಹೊರಡಿಸಿದೆ. ಫೆಬ್ರವರಿ-2025ನೇ ಮಾಹೆಗೆ ಸಂಬಂಧಿಸಿದ 5 ಕೆಜಿ ಅಕ್ಕಿಯನ್ನು ಮಾರ್ಚ್-2025 ನೇ ತಿಂಗಳ ಪಡಿತರ ವಿತರಣೆಯಲ್ಲಿ ಸೇರ್ಪಡೆಗೊಳಿಸಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತರು ಹಂಚಿಕೆ ಮಾಡಿರುತ್ತಾರೆ.

ಅಂದರೆ ಫೆಬ್ರವರಿ-2025ನೇ ಮಾಹೆಯ ರಾಜ್ಯ ಸರ್ಕಾರದ 5 ಕೆಜಿ ಅಕ್ಕಿ ಹಾಗೂ ಮಾರ್ಚ್-2025ನೇ ಮಾಹೆಯ ರಾಜ್ಯ ಸರ್ಕಾರದ 5 ಕೆಜಿ ಅಕ್ಕಿ ಮತ್ತು ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 5 ಕೆಜಿ ಅಕ್ಕಿ ಒಟ್ಟು ಆದ್ಯತಾ ಪಡಿತರ ಚೀಟಿಗೆ ಮಾರ್ಚ್-2025ನೇ ಮಾಹೆಯಲ್ಲಿ ಪಡಿತರ ಚೀಟಿಯಲ್ಲಿರುವ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂತ್ಯೋದಯ ಪಡಿತರ ಚೀಟಿಯಲ್ಲಿರುವ ಒಬ್ಬ, ಇಬ್ಬರು ಮತ್ತು ಮೂರು ಜನ ಸದಸ್ಯರಿಗೆ 35 ಕೆಜಿ ಅಕ್ಕಿ, ನಾಲ್ಕು ಜನ ಸದಸ್ಯರಿದ್ದರೆ 45 ಕೆಜಿ ಅಕ್ಕಿ, ಐದು ಜನ ಸದಸ್ಯರಿದ್ದರೆ 65 ಕೆಜಿ ಅಕ್ಕಿ, ಆರು  ಜನ ಸದಸ್ಯರಿದ್ದರೆ 85 ಕೆಜಿ ಅಕ್ಕಿ, 7 ಜನ ಸದಸ್ಯರಿದ್ದರೆ 105 ಕೆಜಿ ಅಕ್ಕಿ ಹಾಗೂ 10 ಕ್ಕಿಂತ ಮೇಲ್ಪಟ್ಟು ಸದಸ್ಯರು ಇದ್ದಲ್ಲಿ ಇದೇ ಅನುಪಾತ ಮುಂದುವರೆಸಿ ವಿತರಿಸಲಾಗುತ್ತದೆ.

ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು. ಒಂದು ವೇಳೆ ನ್ಯಾಯಬೆಲೆ ಅಂಗಡಿಯವರು ಕಡಿಮೆ ಪ್ರಮಾಣ ವಿತರಿಸಿದಲ್ಲಿ ಉಚಿತ ದೂರವಾಣಿ ಸಂಖ್ಯೆ: 1967 ಅಥವಾ ತಹಶೀಲ್ದಾರ್ ಕಚೇರಿ ಅಥವಾ ಜಂಟಿ ನಿರ್ದೇಶಕರ ಕಚೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular