HomeKarnatakaಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಅಕ್ಕಿ, ರಾಗಿ: ಖಾತೆಗೆ ಹಣ

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಅಕ್ಕಿ, ರಾಗಿ: ಖಾತೆಗೆ ಹಣ

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14 ಕೆಜಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ 3ಕೆಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ಕೆಜಿ ಗೆ 15 ರೂ.ರಂತೆ ಒಪ್ಪಿಗೆ ನೀಡಿದ ಎಪಿಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡುತ್ತಿದ್ದು,  ಹಣ ಪಡೆಯಲು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಮ್ಮ ಬ್ಯಾಂಕ್ ಅಥವಾ ಸ್ಥಳೀಯ ಅಹಾರ ನಿರೀಕ್ಷಕರನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದೆಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular