HomeKarnatakaಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆಜಿ, ಆದ್ಯತಾ ಬಿಪಿಎಲ್ ಪಡಿತರ ಚೀಟಿದಾರರಿಗೆ 3 ಕೆಜಿ ಅಕ್ಕಿ, 2 ಕೆಜಿ ರಾಗಿ ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ.

ಎಪಿಎಲ್ ಸದಸ್ಯರ ಪಡಿತರ ಚೀಟಿಗೆ 5 ಕೆಜಿ ಅಕ್ಕಿ, 2 ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆ.ಜಿ ಗೆ 15 ರೂ. ದರದಲ್ಲಿ ವಿತರಣೆ ಮಾಡಲಾಗುತ್ತದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಪಡಿತರ ಚೀಟಿದಾರರಿಗೆ ಈ ರೀತಿಯಾಗಿ ಪಡಿತರ ಹಂಚಿಕೆ ಮಾಡಲಾಗಿದೆ ಎಂದು ಹೊನ್ನಾಳಿ ತಾಲ್ಲೂಕು ತಹಶೀಲ್ದಾರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular