HomeKarnatakaಬಿಪಿಎಲ್ ಕಾರ್ಡ್ ಪಡೆಯಲು ಮಾನದಂಡಗಳ ಪರಿಷ್ಕರಣೆಗೆ ಚಿಂತನೆ

ಬಿಪಿಎಲ್ ಕಾರ್ಡ್ ಪಡೆಯಲು ಮಾನದಂಡಗಳ ಪರಿಷ್ಕರಣೆಗೆ ಚಿಂತನೆ

ಮೈಸೂರು: ಆದ್ಯತಾ ಪಡಿತರ ಚೀಟಿ(ಬಿಪಿಎಲ್ ಕಾರ್ಡ್) ಪಡೆದುಕೊಳ್ಳಲು ನಿಗದಿಪಡಿಸಿದ ಮಾನದಂಡಗಳ ಪರಿಷ್ಕರಣಿಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಸಮಾಜದಲ್ಲಿ ಮಾತನಾಡಿದ ಅವರು, ಈಗ ರದ್ದು ಮಾಡಲಾದ ಕಾರ್ಡ್ ಗಳನ್ನು ಮರು ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಕೆ, ಪಡಿತರ ಸಾಗಾಣೆ ಲಾರಿಗಳಿಗೆ ಜೆಪಿಎಸ್, ಕೇಂದ್ರ ಕಚೇರಿಯಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್, ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ತೂಕದ ಯಂತ್ರ, ಬಯೋಮೆಟ್ರಿಕ್ ವ್ಯವಸ್ಥೆಯ ಪಡಿತರ ವಿತರಣೆ, ಫಲಾನುಭವಿಗಳು ಇ-ಕೆವೈಸಿ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಇದಕ್ಕಾಗಿ ಪಡಿತರ ವಿತರಣೆ ಅಂಗಡಿಯವರಿಗೆ ಪ್ರತ್ಯೇಕ ಸಿಮ್ ಮತ್ತು ಉಪಕರಣ ನೀಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1.30 ಲಕ್ಷ ಅರ್ಜಿಗಳು ಬಿಪಿಎಲ್ ಕಾರ್ಡ್ ಗಾಗಿ ಸಲ್ಲಿಕೆಯಾಗಿದ್ದು ಪರಿಶೀಲನೆ ಬಾಕಿ ಉಳಿದಿದೆ. ಕಾಳಸಂತೆಯಲ್ಲಿ ಪಡಿತರ ಮಾರಿದರೆ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಎಲ್ಪಿಜಿ ಸಿಲಿಂಡರ್ ಗಳ ಅಕ್ರಮ ವರ್ಗಾವಣೆ ಮತ್ತು ದುರ್ಬಳಕೆ ತಡೆಗೆ ಕ್ರಮ ವಹಿಸಲಾಗುವುದು. ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular