HomeKarnatakaಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಬಿಗ್ ಶಾಕ್: ಗ್ರಾಮ, ವಾರ್ಡ್ ಮಟ್ಟದಲ್ಲಿ ಪರಿಶೀಲಿಸಿ ಪಟ್ಟಿಯಿಂದ ಹೊರಕ್ಕೆ

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಬಿಗ್ ಶಾಕ್: ಗ್ರಾಮ, ವಾರ್ಡ್ ಮಟ್ಟದಲ್ಲಿ ಪರಿಶೀಲಿಸಿ ಪಟ್ಟಿಯಿಂದ ಹೊರಕ್ಕೆ

ಬೆಳಗಾವಿ: ಶೀಘ್ರವೇ ಬಿಪಿಎಲ್ ಕಾರ್ಡ್ ಗೆ ಸಂಬಂಧಿಸಿದಂತೆ ಗ್ರಾಮ, ವಾರ್ಡ್ ಮಟ್ಟದಲ್ಲಿ ಪರಿಶೀಲನೆ ನಡೆಸಿ ಯಾರಿಗೂ ತೊಂದರೆಯಾಗದಂತೆ ಅನರ್ಹರನ್ನು ಪಟ್ಟಿಯಿಂದ ಹೊರಹಾಕಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಭರತ್ ಶೆಟ್ಟಿ ಅವರು ಪ್ರಸ್ತಾಪಿಸಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಯಾವುದೇ ಅನಗತ್ಯ ಗೊಂದಲ ಬೇಡ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಮಾನದಂಡಗಳ ಅಡಿಯಲ್ಲಿ ಪಡಿತರ ಚೀಟಿಗಳ ಪರಿಷ್ಕರಣೆ ಮಾಡಿದಾಗ ಕೆಲವು ಗೊಂದಲ ಉಂಟಾಗಿತ್ತು. ನಂತರ ಮೂರು ಲಕ್ಷ ಬಿಪಿಎಲ್ ಕಾರ್ಡುಗಳನ್ನು ರೀ ಸ್ಟೋರ್ ಮಾಡಲಾಗಿದ್ದು, ಯಾವುದೇ ಅರ್ಹರಿಗೆ ಗೊಂದಲವಾಗದಂತೆ ಕಾರ್ಡ್ ವಿತರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಧಿವೇಶನ ಮುಗಿದ ನಂತರ ಪಿಡಿಒ, ಆರ್ಐ, ಆಹಾರ ಇಲಾಖೆ ಅಧಿಕಾರಿಗಳ ತಂಡ ವಾರ್ಡ್, ಗ್ರಾಮ ಮಟ್ಟದಲ್ಲಿ ಮನೆಮನೆಗೆ ತೆರಳಿ ಬಿಪಿಎಲ್ ಗೆ ಸೇರಿದವರನ್ನು ಗುರುತಿಸಲಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂರು ತಿಂಗಳು ಪಡಿತರ ಪಡೆಯದಿದ್ದರೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದೆ. ಬೇರೆ ಬೇರೆ ಕಾರಣಕ್ಕೆ ಪಡಿತರ ಪಡೆಯದೆ ಇರಬಹುದು. ಇದರಿಂದ ಅನಾರೋಗ್ಯ ಪೀಡಿತರು ಚಿಕಿತ್ಸೆ ಪಡೆಯಲು ತೊಂದರೆಯಾಗಿದೆ ಎಂದು ಶಾಸಕ ಭರತ್ ಶೆಟ್ಟಿ ಸರ್ಕಾರದ ಗಮನ ಸೆಳೆದರು.

ಈ ಸಮಸ್ಯೆ ಪರಿಹಾರಕ್ಕೆ ಜಂಟಿ ನಿರ್ದೇಶಕರು, ಜಿಲ್ಲಾ ಮಟ್ಟದ ಅಧಿಕಾರಿಗಳ ಹಂತದಲ್ಲಿ ಸರಿಪಡಿಸಲು ಕ್ರಮ ಕೈಗೊಂಡಿರುವುದಾಗಿ ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular