ಬೆಂಗಳೂರು : ಕೋಟ್ಯಾಧಿಪತಿಗಳು ಕೂಡ ಬಿಪಿಎಲ್ ಕಾರ್ಡ್ ಹೊಂದಿರುವ ವಿಚಾರವನ್ನು ಆಹಾರ ಇಲಾಖೆ ಬಯಲು ಮಾಡಿದ್ದು, ಶೀಘ್ರವೇ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆಯಲ್ಲಿ ಈ ಮಾಹಿತಿ ಬಯಲಾಗಿದೆ.
ಹೌದು, ಕೋಟ್ಯಾಧಿಪತಿಗಳು ಕೂಡ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ 8 ಲಕ್ಷ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಒಟ್ಟು 12, 68, 097 ಅನುಮಾನಾಸ್ಪದ ರೇಷನ್ ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಕೂಡ ಲಕ್ಷ ಲಕ್ಷ ಕಾರ್ಡ್ ರದ್ದಾಗಲಿದೆ. ಶೀಘ್ರವೇ ಆಹಾರ ಇಲಾಖೆ ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.
ವಿವಿಧ ಕಂಪನಿಗಳಲ್ಲಿ ಡೈರೆಕ್ಟರ್ ಆಗಿರುವ ಬಳಿ ಕಾರ್ಡ್ ಪತ್ತೆಯಾಗಿದೆ. ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಸರ್ಕಾರ ಶಾಕ್ ನೀಡಲು ಮುಂದಾಗಿದ್ದು, ಶೀಘ್ರವೇ ಅನರ್ಹರ ಕಾರ್ಡ್ ರದ್ದು ಮಾಡಲಿದೆ.
You Might Also Like
TAGGED:BPL