HomeLatest NewsBREAKING NEWS: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್. ಗವಾಯಿ ನೇಮಕ: ಮೇ 14ರಂದು ಪ್ರಮಾಣ ವಚನ

BREAKING NEWS: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್. ಗವಾಯಿ ನೇಮಕ: ಮೇ 14ರಂದು ಪ್ರಮಾಣ ವಚನ

ನವದೆಹಲಿ: ಜಸ್ಟೀಸ್ ಬಿ.ಆರ್. ಗವಾಯಿ ಅವರು ಮೇ 14 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ಮೇ 14, 2025 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. “ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾದ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ಮೇ 14, 2025 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಸಂತೋಷಪಡುತ್ತೇನೆ” ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular