HomeKarnatakaBREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್; ಬೆಂಗಳೂರು ಸೇರಿ ರಾಜ್ಯದ 8 ಕಡೆ...

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್; ಬೆಂಗಳೂರು ಸೇರಿ ರಾಜ್ಯದ 8 ಕಡೆ ಲೋಕಾಯುಕ್ತ ದಾಳಿ |Lokayukta Raid

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ 8 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದು, ಹಲವು ಅಧಿಕಾರಿಗಳ ನಿವಾಸ ಹಾಗೂ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರು, ಮಂಡ್ಯ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಬೀದರ್, ಕೊಡಗು, ಚಿಕ್ಕಬಳ್ಳಾಪು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಕಾರ್ಯಾಚರಣೆ ಮುಂದುವರಿದೆ. ಬೀದರ್‌ನಲ್ಲೂ ಮೂರು ಕಡೆ ಏಕಕಾಲದಲ್ಲಿ ದಾಳಿ ನಡೆದಿದೆ. ಕೃಷಿ ಇಲಾಖೆಯ ನಿವೃತ್ತ ಆಡಳಿತಾಧಿಕಾರಿ ಮಾಣೀಕ್ ಶೆರಿಕಾರ್ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದ ತಂಡವು ಬೀದರ್ ನಗರದ ಹಕ್ಕ್ ಕಾಲೋನಿಯಲ್ಲಿರುವ ನಿವಾಸ, ಹುಮ್ನಾಬಾದ್‌ನಲ್ಲಿರುವ ನಿವಾಸ ಹಾಗೂ ಚಿಟಗುಪ್ಪ ತಾಲೂಕಿನ ಮುತ್ತಂಗಿ ಗ್ರಾಮದ ಬಳಿಯ ಫಾರ್ಮ್‌ಹೌಸ್ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂರು ಸ್ಥಳಗಳಲ್ಲೂ ಲೋಕಾಯುಕ್ತ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದು, ಅಕ್ರಮ ಆಸ್ತಿ ಗಳಿಕೆ ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಇತರ ಪ್ರಮುಖ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದಾರೆ.ದಾಳಿ ವೇಳೆ ಯಾವುದೇ ದಾಖಲೆಗಳು, ನಗದು ಅಥವಾ ಆಸ್ತಿಗಳು ಪತ್ತೆಯಾಗಿವೆಯೇ ಎಂಬ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ.

ಬೆಂಗಳೂರು, ಮಂಡ್ಯ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಬೀದರ್, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಕಾರ್ಯಾಚರಣೆ ಮುಂದುವರಿದಿದ್ದು, ಶೋಧ ಕಾರ್ಯ ಪೂರ್ಣಗೊಂಡ ಬಳಿಕ ಹೆಚ್ಚಿನ ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.

ಡಿಸ್ಟ್ರಿಕ್ಟ್ ರಿಜಿಸ್ಟ್ರಾರ್ ಶ್ರೀದೇವಿ ಮನೆ, ಕಚೇರಿಗಳ ಮೇಲೆ ದಾಳಿ

ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಲೋಕಾಯುಕ್ತ ಎಸ್‌ಪಿ ಸ್ನೇಹಾ ಅವರ ನೇತೃತ್ವದಲ್ಲಿ ಬಸವನಗುಡಿಯ ಡಿಸ್ಟ್ರಿಕ್ಟ್ ರಿಜಿಸ್ಟ್ರಾರ್ ಶ್ರೀದೇವಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶ್ರೀದೇವಿ ಅವರ ಯಲಹಂಕದಲ್ಲಿರುವ ಮನೆ, ಬಸವನಗುಡಿಯ ಕಚೇರಿ ಹಾಗೂ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ರಾಮನಗರದ ಕಚೇರಿ ಸೇರಿದಂತೆ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಲಾಗಿದೆ. ಅಧಿಕಾರಿಗಳು ಪ್ರಮುಖ ದಾಖಲೆಗಳು, ಆಸ್ತಿ-ಪಾಸ್ತಿ ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸುತ್ತಿದ್ದಾರೆ.

ಹೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ

ಇನ್ನು ಹೆಸ್ಕಾಂ ಎಇಇ ಅವರ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಮನೆಯಲ್ಲಿರುವ ಚಿನ್ನಾಭರಣದ ನಿಖರ ತೂಕ ಹಾಗೂ ಮೌಲ್ಯವನ್ನು ಪರಿಶೀಲಿಸಲು ಲೋಕಾಯುಕ್ತ ಸಿಬ್ಬಂದಿ ಅಕ್ಕಸಾಲಿಗನನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಅಧಿಕಾರಿಗಳು ಆಸ್ತಿ-ಪಾಸ್ತಿಗಳ ಸಂಪೂರ್ಣ ವಿವರಗಳನ್ನು ಕಲೆಹಾಕುತ್ತಿದ್ದು, ಶೋಧ ಕಾರ್ಯ ಮುಂದುವರಿದಿದೆ.

ಮಡಿಕೇರಿ ನಗರಸಭೆ ಆಯುಕ್ತ ರಮೇಶ್ ಮನೆ, ಕಚೇರಿ ಮೇಲೆ ದಾಳಿ

ಸಾರ್ವಜನಿಕರಿಂದ ಬಂದ ದೂರುಗಳು ಹಾಗೂ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮಡಿಕೇರಿ ನಗರಸಭೆ ಆಯುಕ್ತ ಹೆಚ್.ಆರ್. ರಮೇಶ್ ಅವರ ನಿವಾಸ ಮತ್ತು ಕಚೇರಿಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಮನೆ ಮತ್ತು ಕಚೇರಿಯಲ್ಲಿ ಶೋಧ ನಡೆಸಿರುವ ಅಧಿಕಾರಿಗಳು ಪ್ರಮುಖ ದಾಖಲೆಗಳು ಹಾಗೂ ಆಸ್ತಿ-ಪಾಸ್ತಿಗೆ ಸಂಬಂಧಿಸಿದ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ. ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ.

ಚಿತ್ರದುರ್ಗ ಎಸಿ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಎಫ್‌ಡಿಎ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಎಫ್‌ಡಿಎ ಬಸವರಾಜು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ಆರ್‌ಟಿಸಿ ತಿದ್ದುಪಡಿ ಮಾಡಿಕೊಡಲು ₹40 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಕೆಲ್ಲೋಡು ಗ್ರಾಮದ ಹನುಮಂತಪ್ಪ ಎಂಬುವವರಿಂದ ಹಣ ಪಡೆಯುತ್ತಿದ್ದ ಬಸವರಾಜು ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಎಸ್‌ಪಿ ಕವಲೇಪುರ ಹಾಗೂ ಡಿವೈಎಸ್‌ಪಿ ಕಲಾವತಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಲಂಚದ ಹಣ ಸೇರಿದಂತೆ ಸಂಬಂಧಿತ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular