
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಆಟ್ಟೂರು ಬಳಿಯ ಮದರ್ ಡೈರಿ ಸಮೀಪ ಓವರ್ ಟೇಕ್ ಮಾಡುವ ವೇಳೆ ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತ ವ್ಯಕ್ತಿಯನ್ನು ಭರತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಅ[ಘಾತದ ಬಳಿಕ ಬಿಎಂಟಿಸಿ ಬಸ್ ಚಾಲಕ ಪರಾರಿಯಾಗಿದ್ದಾನೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
