HomeLatest NewsBREAKING: ಮಹಿಳೆಯನ್ನು ಮಂಚಕ್ಕೆ ಕರೆದ ಆರೋಪ: ಬ್ರಹ್ಮಾನಂದ ಗುರೂಜಿ ವಿರುದ್ಧ FIR ದಾಖಲು

BREAKING: ಮಹಿಳೆಯನ್ನು ಮಂಚಕ್ಕೆ ಕರೆದ ಆರೋಪ: ಬ್ರಹ್ಮಾನಂದ ಗುರೂಜಿ ವಿರುದ್ಧ FIR ದಾಖಲು

ಬೆಂಗಳೂರು: ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿ, ಮಂಚಕ್ಕೆ ಕರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾನಂದ ಗುರೂಜಿ ವಿರುದ್ಧ ದೊಡ್ದಬಳ್ಳಾಪುರ ಮಹಿಳಾ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೆಳೆಕೋಟೆಯಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿತ್ತು. ಮಹಿಳೆಗೆ ಸೈಟ್ ಕೊಡಿಸುವುದಾಗಿ ಹೇಳಿ ಹಣ ಪಡೆದು ಸೈಟ್ ಕೊಡಿಸದೇ ವಂಚಿಸಿದ್ದಲ್ಲದೇ ಹಣ ವಾಪಾಸ್ ಕೇಳುತ್ತಿದ್ದಂತೆ ಬ್ರಹ್ಮಾನಂದ ಗುರೂಜಿ ಮಹಿಳೆಯನ್ನು ತನ್ನ ರೂಮಿಗೆ ಬರುವಂತೆ ಮಂಚಕ್ಕೆ ಕರೆದಿದ್ದಾರೆ. ಈ ಕುರಿತ ಆಡಿಯೋ ಕೂಡ ವೈರಲ್ ಆಗಿತ್ತು.

ಪ್ರಕರಣ ಸಂಬಂಧ ಮಹಿಳೆಯ ಪತಿ ದೊಡ್ದಬಳ್ಳಾಪುರದ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಮೇರೆಗೆ ಬ್ರಹ್ಮಾನಂದ ಗುರೂಜಿ ಹಾಗೂ ಆತನ ಪತ್ನಿ ಶಿಲ್ಪಾ ವಿರುದ್ಧ ಎಫ್ಐಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular