HomeKarnatakaBIG NEWS: ಕರ್ತವ್ಯನಿರತ ಅರಣ್ಯ ಇಲಾಖೆ ಸಿಬ್ಬಂದಿ ಬ್ರೇನ್ ಸ್ಟ್ರೋಕ್ ಗೆ ಬಲಿ

BIG NEWS: ಕರ್ತವ್ಯನಿರತ ಅರಣ್ಯ ಇಲಾಖೆ ಸಿಬ್ಬಂದಿ ಬ್ರೇನ್ ಸ್ಟ್ರೋಕ್ ಗೆ ಬಲಿ

ಚಾಮರಾಜನಗರ: ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಬ್ರೇನ್ ಸ್ಟ್ರೋಕ್ ನಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಂಡೀಪುರದ ಮದ್ದೂರು ವಲಯದಲ್ಲಿ ನಡೆದಿದೆ.

ಗೋಪಾಲಪುರದ ಮಹೇಶ್ ಮೃತ ಸಿಬ್ಬಂದಿ. ಕಳೆದ 28 ವರ್ಷಗಳಿಂದ ಹೊರಗುತ್ತಿಗೆ ನೌಕರರಾಗಿ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಳ್ಳಬೇಟೆ ಶಿಬಿರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಬ್ರೇನ್ ಸ್ಟ್ರೋಕ್ ಆಗಿ ಮಹೇಶ್ ಸಾವನ್ನಪ್ಪಿದ್ದಾರೆ. ತಕ್ಷಣ ಅವರನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸಿಲ್ಲ.

ಮೃತ ಸಿಬ್ಬಂದಿ ಕುಟುಂಬಕ್ಕೆ ಅರಣ್ಯ ಇಲಾಖೆ ನಿಯಮಗಳ ಪ್ರಕಾರ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಮದ್ದೂರು ವಲಯ ಅರಣ್ಯಾಧಿಕಾರಿ ಕಚೇರಿ ಮುಂದೆ ಮೃತದೇಹವಿಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular