HomeJobsಶಾಲಾ ಶಿಕ್ಷಣ ಇಲಾಖೆ BRC ಕೇಂದ್ರಗಳಲ್ಲಿ ಮಾನಸಿಕ ಆರೋಗ್ಯ ಸಲಹೆಗಾರರ ಹುದ್ದೆಗೆ ಅರ್ಜಿ

ಶಾಲಾ ಶಿಕ್ಷಣ ಇಲಾಖೆ BRC ಕೇಂದ್ರಗಳಲ್ಲಿ ಮಾನಸಿಕ ಆರೋಗ್ಯ ಸಲಹೆಗಾರರ ಹುದ್ದೆಗೆ ಅರ್ಜಿ

ಶಿವಮೊಗ್ಗ: ಶಾಲಾ ಶಿಕ್ಷಣ ಇಲಾಖೆಯು ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳ ಬಿ.ಆರ್.ಸಿ. ಕೇಂದ್ರಗಳಲ್ಲಿ 2026-27ನೇ ಸಾಲಿಗೆ 6 ತಿಂಗಳ ತಾತ್ಕಾಲಿಕ ಅವಧಿಗೆ ‘ಮಾನಸಿಕ ಆರೋಗ್ಯ ಸಲಹೆಗಾರ/ಸಮಾಲೋಚಕರ’ ಹುದ್ದೆಗಳ ಭರ್ತಿಗೆ 28 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಎಂ.ಎ. ಅಥವಾ ಎಂ.ಎಸ್ಸಿ ಪದವಿ ಪೂರ್ಣಗೊಳಿಸಿರಬೇಕು.

ಮಾಸಿಕ ವೇತನ ರೂ. 40,000 ಹಾಗೂ ಪ್ರಯಾಣ ಭತ್ಯೆಯಾಗಿ ರೂ. 10,000 ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 17 ರೊಳಗಾಗಿ ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular